ಮನೆಯ ಒಳಗೆ ಬರಬೇಡ ಎಂದಿದ್ದಕ್ಕೆ ಪತಿಯನ್ನೇ ಕೊಂದ ಪತ್ನಿ…

60
firstsuddi

ಮಂಡ್ಯ: ಮನೆಯ ಒಳಗೆ ಬರಬೇಡ ಎಂದಿದ್ದಕ್ಕೆ ಪತಿಯನ್ನು ಆತನ ಪತ್ನಿ ಹಾಗೂ ಮಗ ಸೇರಿಕೊಂಡು ಕೊಲೆಗೈದಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಚಾಪುರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಉಮೇಶ್ (45) ಮೃತ ದುರ್ದೈವಿ. ಮೃತನ ಪತ್ನಿ ಸವಿತಾ ಹಾಗೂ ಮಗ ಶಶಾಂಕ್ ಹತ್ಯೆಗೈದ ಆರೋಪಿಗಳಾಗಿದ್ದಾರೆ. ಸವಿತಾ ಮೂರು ತಿಂಗಳಿಂದ ಗಂಡನನ್ನು ತೊರೆದು ಬೆಂಗಳೂರಿನಲ್ಲಿ ಮಗನ ಜೊತೆ ವಾಸವಾಗಿದ್ದಳು. ನಿನ್ನೆ ರಾತ್ರಿ ಪಿತೃಪಕ್ಷ ಹಬ್ಬ ಮಾಡಲು ಊರಿಗೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ.

ಉಮೇಶ್, ಪತ್ನಿ ಸವಿತಾ ಅವರನ್ನು ಮನೆಯೊಳಗೆ ಸೇರಿಸಿಲ್ಲ, ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಸವಿತಾ ಬೆಂಗಳೂರಿನಿಂದ ಮಗ ಶಶಾಂಕ್​ನನ್ನು ಕರೆಸಿಕೊಂಡಿದ್ದಾಳೆ. ನಂತರ ಇಬ್ಬರು ಸೇರಿಕೊಂಡು ರೀಪ್‍ನಿಂದ ಉಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಪರಿಣಾಮ ಉಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನು ಘಟನೆ ನಂತರ ಪತ್ನಿ ಸವಿತಾ, ಮಗ ಶಶಾಂಕ್ ಪರಾರಿಯಾಗಿದ್ದು, ಈ ಸಂಬಂಧ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.