ಮನೆ ಬಿಟ್ಟು ಹೋಗಲ್ಲ ಎಂದಿದ್ದಕ್ಕೆ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಸೊಸೆ!

60
firstsuddi

ತುಮಕೂರು : ಮನೆ ಬಿಟ್ಟು ಹೋಗಲ್ಲ ಎಂದಿದ್ದಕ್ಕೆ ಅತ್ತೆಯ ಮೇಲೆ ಸೊಸೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಪಟ್ಟಣದ ಕೆಆರ್‌ಎಸ್ ಆಗ್ರಹಾರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಚಿಕ್ಕತಾಯಮ್ಮ (65)ಎಂದು ಗುರುತಿಸಲಾಗಿದೆ.

ಚಿಕ್ಕತಾಯಮ್ಮ ಅವರಿಗೆ ಶಿವಕುಮಾರ್ ಹಾಗೂ ಎನ್.ಶಂಕರ್ ಇಬ್ಬರು ಗಂಡು ಮಕ್ಕಳಿದ್ದಾರೆ. ಶಿವಕುಮಾರ್ ಬೆಂಗಳೂರಿನಲ್ಲಿ ವಾಸವಾಗಿದ್ದರೆ, ಎನ್.ಶಂಕರ್ ಜೊತೆ ಚಿಕ್ಕತಾಯಮ್ಮ ಕೆ.ಆರ್.ಎಸ್ ಆಗ್ರಹಾರದದಲ್ಲಿ ವಾಸವಾಗಿದ್ದರು. ಬೆಂಗಳೂರಿನಲ್ಲಿ ಇರುವ ಶಿವಕುಮಾರ್ ಅವರ ಮನೆಗೆ ಹೋಗು ಎಂದು ಸೊಸೆ ಸೌಮ್ಯ, ತನ್ನ ಅತ್ತೆ ಚಿಕ್ಕತಾಯಮ್ಮನಿಗೆ ಪದೇ, ಪದೇ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು. ಈ ಸಂಬಂಧ ಹಲವು ಬಾರಿ ಸೌಮ್ಯಳಿಗೆ ಮನೆಯ ಅಕ್ಕಪಕ್ಕದವರು ಬುದ್ದಿವಾದ ಹೇಳಿದ್ದರು.

ಹೀಗಿದ್ದರೂ ನಿನ್ನೆ ಬೆಳಗ್ಗೆ ಸೊಸೆ ಸೌಮ್ಯ ಅತ್ತೆಗೆ ಕಬ್ಬಿಣದ ಪೈಪ್ ನಿಂದ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ರಕ್ತ ಬರುವಂತೆ ಹೊಡೆದಿರುವುದಲ್ಲದೇ ಬೆಂಗಳೂರಿಗೆ ಹೋಗು ಎಂದರೂ ಹೋಗಲ್ಲ ಅಂತೀಯಾ ಎಂದು ಅವಾಚ್ಯ ಶಬ್ದಗಳಿಂದ ಬೈದು, ನಿನ್ನನ್ನು ಕೊಲೆ ಮಾಡಿಯೇ ತೀರುತ್ತೇನೆ ಎಂದು ಹೇಳಿದ್ದಾರೆ.

ಅಷ್ಟರಲ್ಲಿ ಪಕ್ಕದ ಮನೆಯ ಹೆಚ್.ವಿ.ಲಕ್ಷ್ಮಣಗೌಡ ಹಾಗೂ ನಾಗೇಂದ್ರ ಸೌಮ್ಯ ಕೈಯಲ್ಲಿದ್ದ ಕಬ್ಬಿಣದ ಪೈಪ್ ಅನ್ನು ಕಿತ್ತುಕೊಂಡು ತೀವ್ರವಾಗಿ ಗಾಯಗೊಂಡಿದ್ದ, ಚಿಕ್ಕತಾಯಮ್ಮನನ್ನು ಅಂಬುಲೆನ್ಸ್ ನಲ್ಲಿ ಕರೆದೊಯ್ದು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹೆಚ್.ವಿ.ಲಕ್ಷ್ಮಣಗೌಡ ಕುಣಿಗಲ್ ಠಾಣೆಗೆ ದೂರು ನೀಡಿದ್ದಾರೆ.