ಚಿಕ್ಕಮಗಳೂರು : ಸ್ವಾತಂತ್ರ್ಯಅಮೃತ ಮಹೋತ್ಸವದ ಪ್ರಯುಕ್ತ ಭಾರತ ಸೇವಾದಳದ ಜ್ಞಾನ ಜ್ಯೋತಿ ಘಟಕ ನಗರದ ಆಜಾದ್ ಪಾರ್ಕ್ ಸರ್ಕಾರಿ ಕನ್ನಡ ಶಾಲೆಯಲ್ಲಿ ಇಂದು ಆಯೋಜಿಸಿದ್ದ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಅಭಿಯಾನಕ್ಕೆ ಮಾಜಿ ಶಾಸಕ ಐ.ಬಿ.ಶಂಕರ್ ಚಾಲನೆ ನೀಡಿದರು.
ಈ ವೇಳೆ ಸೇವಾದಳದ ತಾಲ್ಲೂಕು ಸಂಘಟಕ ಎಸ್.ಇ.ಲೋಕೇಶ್ವರಾಚಾರ್, ಜಗದೀಶಾಚಾರ್, ಸಿಆರ್‍ಪಿ ಪೂರ್ಣೇಶ್, ಮಹೇಶಪ್ಪ, ನಾಗವೇಣಿ, ಸಾವಿತ್ರಿ, ಜಯಂತಿ ಉಪಸ್ಥಿತರಿದ್ದರು.










