ಮೈಸೂರು : ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಯೊಬ್ಬ ಬೆಂಕಿ ಹಚ್ಚಿ ಪರಾರಿಯಾಗಿದ್ದು, ಕಾರಿಗೆ ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜಿಲ್ಲೆಯ ರಾಘವೇಂದ್ರ ನಗರದ ನಿವಾಸಿ ಸುರೇಂದ್ರ ಎಂಬುವವರಿಗೆ ಸೇರಿದ ಎರಡು ಕಾರುಗಳಿಗೆ ನಿನ್ನೆ ಮಧ್ಯರಾತ್ರಿ ಕಿಡಿಗೇಡಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪರಿಣಾಮ ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ನಜರಬಾದ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










