ಮನ್‌ಮುಲ್‌‌ನಲ್ಲಿ ಮತ್ತೊಂದು ಹಗರಣ ಬೆಳಕಿಗೆ – ಹಾಲಿಗೆ ರಾಸಾಯನಿಕ ಮಿಶ್ರಣ…

82
firstsuddi

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಇದೀಗ ಮತ್ತೊಂದು ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ. ಈ ಬಾರಿ ನೀರಿಗೆ ರಾಸಾಯನಿಕವನ್ನೇ ಬೆರೆಸಿ ಮಾರಾಟ ಮಾಡುತ್ತಿರುವುದು ತಿಳಿದು ಬಂದಿದೆ.

ಕಳೆದ ವರ್ಷವಷ್ಟೇ ಮನ್ ಮುಲ್ ಗೆ ಸರಬರಾಜು ಆಗುವ ಹಾಲಿಗೆ ನೀರು ಮಿಶ್ರಣವಾಗುತ್ತಿದೆ ಎಂಬ ಹಗರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ತಪ್ಪಿತಸ್ಥರನ್ನು ಮಟ್ಟಹಾಕಲು ರಾಜ್ಯ ಸರ್ಕಾರ ಸಿಒಡಿ ತನಿಖೆಗೆ ಆದೇಶ ಹೊರಡಿಸಿದ್ದು, ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಇದೀಗ ಹಾಲಿಗೆ ರಾಸಾಯನಿಕ ಕಲಬೆರಕೆ ಹಗರಣ ಬೆಳಕಿಗೆ ಬಂದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಗೆರೆ ಡೈರಿಯಿಂದ ಪೂರೈಕೆಯಾಗುತ್ತಿದ್ದ ಹಾಲಿನಲ್ಲಿ ರಾಸಾಯನಿಕ ಮಿಶ್ರಣ ಪತ್ತೆಯಾಗಿದೆ. ಉಪ್ಪಿನಾಂಶದ ರಾಸಾಯನಿಕ ಕಲಬೆರಕೆಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಇದೀಗ ಕೆ.ಹೊನ್ನಲಗೆರೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಹಾಲು ಶೇಖರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮನ್ ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.