ಮಮತಾ ಬ್ಯಾನರ್ಜಿ ತೆರಳುತ್ತಿದ್ದ ಕಾರು ಅಪಘಾತ- ಸಣ್ಣಪುಟ್ಟ ಗಾಯ…

38
firstsuddi

ದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಇಂದು ಹವಾಮಾನ ವೈಪರಿತ್ಯದಿಂದಾಗಿ ರಸ್ತೆ ಮೂಲಕ ಬರ್ಧಮಾನ್‌ನಿಂದ ಕೋಲ್ಕತ್ತಾಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಮಮತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಇಂದು ಮಧ್ಯಾಹ್ನ ಪೂರ್ವ ಬರ್ಧಮಾನ್ ಜಿಲ್ಲೆಯಲ್ಲಿ ಆಡಳಿತಾತ್ಮಕ ಸಭೆಯಿಂದ ಹೊರಟಿದ್ದ ಸಂದರ್ಭ ಮಮತಾ ಬ್ಯಾನರ್ಜಿ ಅವರ ವಾಹನ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ ಚಾಲಕನ ಪಕ್ಕದಲ್ಲಿ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಮಮತಾ ಬ್ಯಾನರ್ಜಿ ಅವರ ಹಣೆ ಮತ್ತು ತೋಳಿನ ಮೇಲೆ ಸಣ್ಣ ಗಾಯವಾಗಿದೆ. ಬ್ಯಾನರ್ಜಿ ಅವರನ್ನು ಕೋಲ್ಕತ್ತಾಗೆ ಕರೆತರಲಾಗುತ್ತಿದೆ. ಕೋಲ್ಕತ್ತಾದಲ್ಲಿ ವೈದ್ಯರು ಅವರಿಗೆ ಚಿಕಿತ್ಸೆ ನೀಡಲಿದ್ದಾರೆ.