ನವದೆಹಲಿ : ಟಿಎಂಸಿ ಸಂಸದ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಹಾಗೂ ಅವರ ಪತ್ನಿ ರುಜಿರಾ ಬ್ಯಾನರ್ಜಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸೆಪ್ಟೆಂಬರ್ 3ರಂದು ಬ್ಯಾಂಕ್ ದಾಖಲೆಗಳ ಜೊತೆ ವಿಚಾರಣೆಗೆ ಹಾಜರಾಗುವಂತೆ ಡೈಮಂಡ್ ಹರ್ಬರ್ ಕ್ಷೇತ್ರದ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಇಡಿ ಸೂಚಿಸಿದೆ. ಅದೇ ರೀತಿ ಪತ್ನಿ ರೂಜಿರಾ ಅವರಿಗೆ ಸೆಪ್ಟೆಂಬರ್ 1ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಪಶ್ಚಿಮ ಬಂಗಾಳದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಾದ ಶ್ಯಾಮ್ ಸಿಂಗ್ ಗೆ ಸೆಪ್ಟೆಂಬರ್ 8, ಜ್ಞಾನವಂತ ಸಿಂಗ್ ಗೆ ಸೆಪ್ಟೆಂಬರ್ 9 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಗಳ ಖಾತೆಗೆ ಇಬ್ಬರು ತಮ್ಮ ಕಂಪನಿಯಿಂದ ಹಣ ವರ್ಗಾವಣೆ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆ ಕೇಂದ್ರಿಯ ತನಿಖಾ ಸಂಸ್ಥೆ ಎಫ್ಐಆರ್ ದಾಖಲಿಸಿತ್ತು. ನಂತರ ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಸಹ ಪ್ರಕರಣ ದಾಖಲಿಸಿತ್ತು.










