ಕಲಬುರಗಿ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಅಫಜಲಪುರ ಹೊರವಲಯದಲ್ಲಿ ನಡೆದಿದೆ.
ಜಿಲ್ಲೆಯ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನ ಮುಗಿಸಿ ಮಹಾರಾಷ್ಟ್ರ ಕಡೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಮತ್ತು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.
ಚಾಲಕ ನಿದ್ರೆ ಮಂಪರಿನಲ್ಲಿದ್ದ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










