ಚಾಮರಾಜನಗರ : ಮೈಸೂರಿನ ಚಾಮುಂಡಿ ಬೆಟ್ಟದ ಭೂ ಕುಸಿತದ ಬಳಿಕ ಇದೀಗ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿ ಕೆಲ ಸಮಯ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಮಲೆಮಹದೇಶ್ವರ ಬೆಟ್ಟದಿಂದ ತಮಿಳುನಾಡಿಗೆ ಹೋಗುವ ಪಾಲಾರ್ ಮಾರ್ಗದಲ್ಲಿ ಭೂ ಕುಸಿತ ಉಂಟಾಗಿ ಭತ್ತ ಕಟಾವು ಯಂತ್ರ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುಸಿತ ಉಂಟಾದ ಸ್ಥಳದಲ್ಲಿ ಕಲ್ಲು, ಮಣ್ಣನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಸದ್ಯ ಮಳೆಯಿಂದಾಗಿ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಕೆಲ ಕಾಮಗಾರಿಗೂ ಅಡಚಣೆ ಉಂಟಾಗಿದೆ.










