ಮಲೆ ಮಹದೇಶ್ವರ ಸ್ವಾಮಿ ಫೇಸ್‍ಬುಕ್ ಪೇಜ್ ಹ್ಯಾಕ್ – ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿ ವಿಕೃತಿ…

60
firstsuddi

ಚಾಮರಾಜನಗರ : ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಹೆಸರಿನ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಈ ಕುರಿತು ದೂರು ದಾಖಲಾಗಿದೆ.

ಕೊಳ್ಳೇಗಾಲದ ಸಂಜಯ್ ಕುಮಾರ್ 2013ರಲ್ಲಿ ಈ ಫೇಸ್ ಬುಕ್ ಪೇಜ್ ಕ್ರಿಯೆಟ್ ಮಾಡಿದ್ದರು. ಈ ಪೇಜ್ ಗೆ ಸುಮಾರು 17 ಸಾವಿರ ಅನುಯಾಯಿಗಳಿದ್ದಾರೆ. ಇದರಲ್ಲಿ ದೇವರ ಪೋಟೋಗಳು, ಪೂಜಾ ಕೈಂಕರ್ಯಗಳು ಸೇರಿದಂತೆ ಇತರ ಮಾಹಿತಿಗಳನ್ನು ಅಪ್ ಲೋಡ್ ಮಾಡಲಾಗುತ್ತಿದೆ. ಆದರೆ ಎರಡು ತಿಂಗಳ ಹಿಂದೆ ಈ ಪೇಜ್ ಅನ್ನು ಹ್ಯಾಕ್ ಮಾಡಲಾಗಿದೆ. ಸ್ಟೋರಿಗಳ ವಿಭಾಗದಲ್ಲಿ ಹುಡುಗಿಯರ ಅಶ್ಲೀಲ ಪೋಟೋ, ವಿಡಿಯೋಗಳನ್ನು ಹಾಕಲಾಗುತ್ತಿದೆ.

ಫೇಸ್ ಬುಕ್ ಪೇಜ್ ಹ್ಯಾಕ್ ಆದ ಮರು ದಿನವೇ ಅಡ್ಮಿನ್ ಸಂಜಯ್ ಕುಮಾರ್ ಸೈಬರ್ ಕ್ರೈಂಗೆ ದೂರು ದಾಖಲಿಸಿದ್ದು, ಮಾಹಿತಿ ತಿಳಿದ ಪೊಲೀಸರು 30 ಜನರಿಂದ ರಿಪೋರ್ಟ್ ಮಾಡಿಸಲು ಹೇಳಿ ಸುಮ್ಮನಾಗಿದ್ದಾರೆ. ಈವರೆಗೆ 5 ಜನರಿಂದ ಸಂಜಯ್ ರಿಪೋರ್ಟ್ ಮಾಡಿಸಿದ್ದಾರೆ. ಹಾಗಾಗಿ ಹ್ಯಾಕ್ ಆಗಿರುವ ಪೇಜ್ ಅನ್ನು ಡೀ ಆ್ಯಕ್ಟಿವ್ ಮಾಡಲು ಸಾಧ್ಯವಾಗುತ್ತಿಲ್ಲ. ಪೊಲೀಸರು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಂಜಯ್ ಮನವಿ ಮಾಡಿದ್ದಾರೆ.