ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುವುದಾದರೆ ನಾನು ಸ್ವಾಗತಿಸುತ್ತೇನೆ : ಉಮೇಶ್ ಜಾಧವ್…

295
firstsuddi

ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರು ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುವುದಾದರೆ ನಾನು ಸ್ವಾಗತಿಸುತ್ತೇನೆ. ದಲಿತರೊಬ್ಬರು ಸಿಎಂ ಆದರೆ ನಾನು ಕೂಡಾ ಖುಷಿ ಪಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ನಾನು ಸೋಲಿಸಿಲ್ಲ. ಕಲಬುರಗಿ ಕ್ಷೇತ್ರದ ಮತದಾರರು ಖರ್ಗೆಯವರನ್ನು ಸೋಲಿಸಿದ್ದಾರೆ. ರಾಜ್ಯದಲ್ಲಿ ನೀರು ಸೇರಿದಂತೆ ಹಲವಾರು ಗಂಭೀರ ಸಮಸ್ಯೆಗಳಿವೆ. ಜನರಿಗೆ ಉತ್ತಮ ಆಡಳಿತ ಹಾಗೂ ಸ್ಥಿರವಾದ ಸರ್ಕಾರ ಬೇಕೆನ್ನುವ ಆಸೆಯಿದೆ. ಕ್ಷೇತ್ರದ ಜನರ ಸಮಸ್ಯೆಗಳು ಬಗೆಹರಿಯದಿದ್ದಾಗ ಕೆಲವೊಂದು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಅತೃಪ್ತ ಶಾಸಕರು ರೆಬೆಲ್ ಶಾಸಕರಾಗಿದ್ದಾರೆ. ರಾಜ್ಯ ಸರ್ಕಾರದ ಬೆಳವಣಿಗೆ ಬಗ್ಗೆ ನನಗೇನು ಗೊತ್ತಿಲ್ಲ. ನಾನು ಈಗಾ ಸಂಸದನಾಗಿದ್ದೇನೆ ನನ್ನ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ರಾಜ್ಯದಲ್ಲಿ ಸರ್ಕಾರ ಉಳಿಯುತ್ತೋ, ಇಲ್ಲವೋ ನನಗೆ ಗೊತ್ತಿಲ್ಲ ಎಂದರು.