ಮಳಲಿ ಮಸೀದಿ ವಿವಾದ – ವಿಹೆಚ್​ಪಿ ಅರ್ಜಿ ಸ್ವೀಕರಿಸಿದ ಕೋರ್ಟ್…

64
firstsuddi

ಮಂಗಳೂರು : ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿರುವ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮಸೀದಿ ಕಮಿಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ್ದು, ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ಅರ್ಜಿಯ ವಿಚಾರಣೆ ನಡೆಯಲಿದೆ ಎಂದು ಮಹತ್ವದ ತೀರ್ಪು ನೀಡಿದೆ.

ಮಳಲಿ ಮಸೀದಿಯಲ್ಲಿ ಪತ್ತೆಯಾಗಿರುವ ದೇವಾಲಯದ ರಚನೆ ಬಗ್ಗೆ ಮೊದಲು ಪರಿಶೀಲನೆಯಾಗಬೇಕು. ಅದರ ವಸ್ತುಸ್ಥಿತಿ ಪರಿಶೀಲಿಸಲು ಕೋರ್ಟ್ ಕಮಿಷನರ್ ಒಬ್ಬರನ್ನು ನೇಮಿಸಬೇಕು. ಜ್ಞಾನವಾಪಿ ಮಸೀದಿಯ ಮಾದರಿಯಲ್ಲಿ ಕಮಿಷನರ್ ನೇಮಕ ಮಾಡುವ ಕುರಿತು ಪರಿಗಣಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಜಾಗೊಳಿಸುವಂತೆ ಮಸೀದಿ ಆಡಳಿತ ಮಂಡಳಿ ಮನವಿ ಮಾಡಿಕೊಂಡಿತ್ತು.

ನ್ಯಾಯಾಲಯ ವಿಹೆಚ್​ಪಿ ಅರ್ಜಿ ಸ್ವೀಕರಿಸಿ ಜನವರಿ 8, 2023ಕ್ಕೆ ವಿಚಾರಣೆ ಮುಂದೂಡಿದೆ. ಜ್ಞಾನವಾಪಿ ಮಾದರಿಯಲ್ಲೇ ಮಳಲಿ ಮಸೀದಿ ವಿವಾದದ ವಿಚಾರಣೆ ಸಾಗಲಿದೆ.