ಬೆಂಗಳೂರು : ಭಾರೀ ಮಳೆಯಿಂದಾಗಿ ನಗರದ ಹಲವು ಕಡೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಕಚೇರಿಯಲ್ಲಿ ತುರ್ತು ಸಭೆ ಕರೆದಿದ್ದಾರೆ,
ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಧ್ಯಾಹ್ನ 12 ಗಂಟೆಗೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಎಲ್ಲ ಇಂಜಿನಿಯರ್ಗಳ ಸಭೆ ಮಾಡುತ್ತಿದ್ದೇನೆ. ಈಗಾಗಲೇ ಕೆಲವು ಸ್ಥಳಗಳ ಪರಿಶೀಲನೆ ಆರಂಭವಾಗಿದ್ದು, ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ ಕೂಡಲೇ ದುರಸ್ತಿ ಕಾರ್ಯ ನಡೆಸಲು ಮತ್ತು ಹೊಸ ಕಾಲುವೆ ನಿರ್ಮಿಸಲು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದರು.
ಕಂದಾಯ ಸಚಿವ ಆರ್ ಅಶೋಕ್, ಉಸ್ತುವಾರಿ ಸಚಿವ ಗೋಪಾಲಯ್ಯ ಇಂದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.










