ಮಳೆ ಆರ್ಭಟ – ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ…

47
firstsuddi

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮೆಜೆಸ್ಟಿಕ್, ಕಾರ್ಪೋರೇಷನ್, ರಾಜಾಜಿನಗರ, ಬಸವೇಶ್ವರ ನಗರ, ಶೇಷಾದ್ರಿಪುರಂ, ವಿಜಯನಗರ, ಶಾಂತಿನಗರ, ವಸಂತ ನಗರ, ಕೆ.ಆರ್ ಮಾರ್ಕೆಟ್,  ಸುದಾಮ್ ನಗರ, ಲಾಲ್ ಬಾಗ್, ಜಯನಗರ, ಜೆ.ಪಿ ನಗರ, ಚಾಮರಾಜಪೇಟೆ, ಬಸವನಗುಡಿ, ಕೋರಮಂಗಲ, ಶಾಂತಿನಗರ, ಪ್ಯಾಲೇಸ್ ರಸ್ತೆ, ಮಲ್ಲೇಶ್ವರಂ, ಹೆಬ್ಬಾಳ ಸೇರಿದಂತೆ ಹಲವಾರು ಕಡೆಗಳಲ್ಲಿ ಭಾರಿ ಮಳೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಡಳಿತ, ಬೆಂಗಳೂರು ನಗರ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಭಾರಿ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಅನುಮತಿಯ ಮೇರೆಗೆ ಇಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಬೈಲಾಂಜನಪ್ಪ ಮಾಹಿತಿ ನೀಡಿದ್ದಾರೆ.