ಬೆಂಗಳೂರು : ಇನ್ಮುಂದೆ ಮಸೀದಿಗಳಲ್ಲಿ ಬೆಳಗ್ಗೆ 5 ಗಂಟೆಗೆ ಆಜಾನ್ ಕೂಗದಿರಲು ನಿರ್ಧರಿಸಲಾಗಿದೆ. ಈ ಸಂಬಂಧ ಮುಸ್ಲಿಂ ಮುಖಂಡರು ಸಭೆ ನಡೆಸಿದ್ದು, ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಇನ್ಮುಂದೆ ಧ್ವನಿ ವರ್ಧಕದ ಮೂಲಕ ಆಜಾನ್ ಕೂಗದಿರಲು ನಿರ್ಧರಿಸಿದೆ.
ಧ್ವನಿ ವರ್ಧಕ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಬೆಳಗ್ಗೆ 6 ಗಂಟೆ ಬಳಿಕ ಪೊಲೀಸರ ಅನುಮತಿ ಪಡೆದು ಆಜಾನ್ ಕೂಗಲು ಸೂಚನೆ ನೀಡಲಾಗಿದೆ.
ಮಸೀದಿಗಳಲ್ಲಿ ಆಜಾನ್ ನಿಷೇಧಿಸಬೇಕೆಂದು ಈಗಾಗಲೇ ಹಿಂದೂ ಸಂಘಟನೆ ಕಾರ್ಯಕರ್ತರು ಸರ್ಕಾರಕ್ಕೆ ಮನವಿ ಮಾಡಿದ್ದರು. ಮನವಿಯನ್ನು ಸ್ವೀಕರಿಸಿದ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿತ್ತು. ಇನ್ಮೇಲೆ ಧ್ವನಿ ವರ್ಧಕ ಬಳಸುವವರು 15 ದಿನಗಳ ಒಳಗೆ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಅಲ್ಲದೇ, ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸದಂತೆ ಸೂಚನೆ ನೀಡಿತ್ತು.










