ಕಲಬುರಗಿ : ಮೇ 9 ರಿಂದ ಶ್ರೀರಾಮ ಸೇನೆ ಆಜಾನ್ ಸೇ ಆಜಾದಿ ಅಭಿಯಾನ ಪ್ರಾರಂಭಿಸಲು ಸಿದ್ದತೆ ನಡೆಸಿದ ಹಿನ್ನೆಲೆ ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರುವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಆಜಾನ್ ಬಗ್ಗೆ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಇದೆ. ಯಾವ ಯಾವ ಸಂದರ್ಭದಲ್ಲಿ ಎಷ್ಟೆಷ್ಟು ಶಬ್ದದ ಡೆಸಿಬಲ್ ಇರಬೇಕು ಅಂತಾ ಸ್ಪಷ್ಟವಾಗಿ ಹೇಳಿದೆ. ಡಿಜಿ ಅವರು ಕೂಡ ಸರ್ಕ್ಯೂಲರ್ ಪಾಸ್ ಮಾಡಿದ್ದಾರೆ. ಠಾಣೆಯಲ್ಲಿ ಶಾಂತಿ ಸಭೆ ನಡೆಸೋದಕ್ಕೆ ಸೂಚಿಸಲಾಗಿದೆ. ಮಹಾ ಮಂಗಳಾರತಿ ಮಾಡುವುದರ ಬಗ್ಗೆ ಮುಂದೆ ನೋಡೋಣ ಎಂದು ಹೇಳಿದ್ದಾರೆ.
ಇನ್ನೂ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರು ಇಡುವುದಕ್ಕೆ ಭಿನ್ನಾಭಿಪ್ರಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೆಸರು ಇಡುವ ವಿಚಾರದಲ್ಲಿ ಯಾವ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದರು.










