ಬೆಳಗಾವಿ : ನನ್ನ ಮೇಲೆ ಷಡ್ಯಂತ್ರ ಮಾಡಿದ ಮಹಾನಾಯಕನನ್ನು ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದಾರೆ.
ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರಿನ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಈಗಾಗಲೇ 7 ಬಾರಿ ಶಾಸಕನಾಗಿದ್ದೇನೆ. 8ನೇ ಬಾರಿಗೆ ನಾನು ಶಾಸಕನಾಗಬೇಕೋ? ಬೇಡವೋ? ಎಂಬುದನ್ನ ಪಕ್ಷದ ಕಾರ್ಯಕರ್ತರು ನಿರ್ಧರಿಸಬೇಕು. 2023ರ ಚುನಾವಣೆ ಬಳಿಕ ನಾನು ರಾಜಕೀಯ ನಿವೃತ್ತಿ ಆಗಬೇಕು ಎಂಬ ಚಿಂತನೆಯಿದೆ ಎಂದು ಹೇಳಿದ್ದಾರೆ.
ಬೇರೆಯವರಿಗೆ ಅವಕಾಶ ಕೊಡಬೇಕಿದೆ. ಈ ಬಗ್ಗೆ ನಮ್ಮ ಕಾರ್ಯಕರ್ತರು, ನಾಯಕರು ನಿರ್ಧಾರ ತೆಗೆದುಕೊಳ್ಳಬೇಕು. 2023ರ ಚುನಾವಣೆಯಲ್ಲೇ ಸ್ಪರ್ಧಿಸುವುದು ಬೇಡ ಅಂದುಕೊಂಡಿದ್ದೆ ಆದ್ರೆ ಆ ಮಹಾನಾಯಕನಿಗೆ ಚಾಲೆಂಜ್ ಮಾಡಲು ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಡಿಕೆಶಿಗೆ ಪರೋಕ್ಷವಾಗಿ ಕುಟುಕಿದ್ದಾರೆ.










