ಮಹಾಭಾರತದ ‘ಶಕುನಿ’ ಪಾತ್ರಧಾರಿ ಗೂಫಿ ಪೈಂಟಲ್ ವಿಧಿವಶ…

66
firstsuddi

ಕಿರುತೆರೆಯ ಖ್ಯಾತ ನಟ, ದೂರದರ್ಶನದಲ್ಲಿ ಪ್ರಸಾರವಾದ ಜನಪ್ರಿಯ ಧಾರಾವಾಹಿ ‘ಮಹಾಭಾರತ’ದಲ್ಲಿ ಶಕುನಿ ಪಾತ್ರ ಮಾಡಿ ಎಲ್ಲರ ಗಮನ ಸೆಳೆದಿದ್ದ ನಟ ಗೂಫಿ ಪೈಂತಲ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಹಲವು ವರ್ಷಗಳಿಂದ ಗೂಫಿ ಅವರು ವಯೋ ಸಹಜ ಕಾಯಿಲೆಯಿಂದ ಬಳುತ್ತಿದ್ದರು. ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಗೂಫಿ ಅವರನ್ನು ವಾರಗಳ ಹಿಂದೆ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರ ಸೋದರ ಸಂಬಂಧಿ ಹಿತೇನ್ ಪೈಂತಲ್ ಅವರು ಈ ನೋವಿನ ಸಂಗತಿ ಹಂಚಿಕೊಂಡಿದ್ದಾರೆ.

ಗೂಫಿ ಕೇವಲ ಕಿರುತೆರೆಯಲ್ಲಿ ಮಾತ್ರವಲ್ಲ, ಬಾಲಿವುಡ್ ನಲ್ಲೂ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಮಹಾಭಾರತದ ಹೊರತಾಗಿಯೂ ಹಲವಾರು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಮಹಾಭಾರತದ ಶಕುನಿ ಪಾತ್ರ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತು. ಮೂಲತಃ ಇವರು ಪಂಜಾಬ್ ನವರು. ವೃತ್ತಿ ಬದುಕಿಗಾಗಿ ಮುಂಬೈಗೆ ಅರಸಿ ಬಂದರು. ಮುಂಬೈನಲ್ಲೇ ಉಳಿದುಕೊಂಡು ಅನೇಕ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದರು.

ಇಂದು ಗೂಫಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. ಮುಂಬೈ ಅಂಧೇರಿಯ ಸ್ಮಶಾನದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ. ಗೂಫಿ ಅವರಿಗೆ ಓರ್ವ ಮಗ ಹಾಗೂ ಸೊಸೆ, ಮೊಮ್ಮಕಳಿದ್ದಾರೆ. ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.