ಮಹಾಮಳೆಗೆ ಬೆಂಗಳೂರು ತತ್ತರ – ಇಂದು, ನಾಳೆ ಯೆಲ್ಲೋ ಅಲರ್ಟ್ ಘೋಷಣೆ…

51
firstsuddi

ಬೆಂಗಳೂರು : ರಾಜಧಾನಿಯಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಬೆಳಗ್ಗೆ ಕೂಡ ಭಾರೀ ಮಳೆಯಾಗಿದೆ.

ಇನ್ನೂ ಎರಡು-ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೆಜೆಸ್ಟಿಕ್, ಮಲ್ಲೇಶ್ವರಂ, ಜಯನಗರ, ಶಿವಾಜಿನಗರ, ಯಶವಂತಪುರ, ಜಯನಗರ, ಜೆ ಪಿ ನಗರ ಸೇರಿದಂತೆ ನಗರದ ವಿವಿಧೆಡೆ ವ್ಯಾಪಕ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.