ಮಹಾಮಾರಿ ಕೊರೊನಾ ವೈರಸ್ ಗೆ ಕೇರಳದಲ್ಲಿ ಮೊದಲ ಬಲಿ…

187
firstsuddi

ಕೇರಳ : ಮಹಾಮಾರಿ ಕೊರೊನಾ ವೈರಸ್‍ಗೆ ಕೇರಳದಲ್ಲಿ ಮೊದಲ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಮಾರ್ಚ್ 16ರಂದು ದುಬೈನಿಂದ ಆಗಮಿಸಿದ 69 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾದ ಬಳಿಕ ಕೊಚ್ಚಿಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಮುಂಜಾನೆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ವೃದ್ಧನ ಸಾವಿನಿಂದ ಕೇರಳ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ.