ಮಹಾಮಾರಿ ಕೊರೊನಾ ಸೋಂಕಿನಿಂದ ಸಿಎಂ ಬಿ.ಎಸ್. ಯಡಿಯೂರಪ್ಪ ಗುಣಮುಖ-ಆಸ್ಪತ್ರೆಯಿಂದ ಬಿಡುಗಡೆ…

146
firstsuddi

ಬೆಂಗಳೂರು : ಕೊರೊನಾ ಸೋಂಕು ದೃಢವಾಗಿದ್ದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಗಸ್ಟ್ 2ರಂದು ರಾತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಒಂದು ವಾರಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.