ಮಹಾಮಾರಿ ಕೊರೊನಾ ಸೋಂಕಿಗೆ ತೆಲಂಗಾಣದ ಯುವ ಪತ್ರಕರ್ತ ಬಲಿ…

142
firstsuddi

ಹೈದರಾಬಾದ್ : ಮಹಾಮಾರಿ ಕೊರೊನಾ ವೈರಸ್‍ಗೆ ತೆಲಂಗಾಣದ ಯುವ ಪತ್ರಕರ್ತರೊಬ್ಬರು ಬಲಿಯಾಗಿದ್ದಾರೆ. ತೆಲುಗು ಖಾಸಗಿ ಸುದ್ದಿ ವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 33 ವರ್ಷದ ಪತ್ರಕರ್ತರೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಬೈಲ್ಯಾಟರಲ್ ನ್ಯುಮೋನಿಯಾ ಹಾಗೂ ಟೈಪ್-1 ರೆಸ್ಪಿರೇಟರಿ ಫೇಲ್ಯೂರ್ ಹಾಗೂ ಅಕ್ಯೂಟ್ ರೆಸ್ಪಿರೇಟರಿ ಡಿಸೀಸ್ ಸಿಂಡ್ರೋಮ್‍ನಿಂದ ಬಳಲುತ್ತಿದ್ದ ಮೃತ ಪತ್ರಕರ್ತನಿಗೆ ಸೋಂಕು ಕಾಣಿಸಿಕೊಂಡ ಬಳಿಕ ಜೂನ್ 4ರಂದು ತೆಲಂಗಾಣದ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಪತ್ರಕರ್ತ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.