ಮಹಾಮಾರಿ ಕೊರೊನಾ ಸೋಂಕಿಗೆ ಬಾಲಿವುಡ್‍ನ ಖ್ಯಾತ ನಿರ್ಮಾಪಕ ಅನಿಲ್ ಸೂರಿ ಬಲಿ…

140
firstsuddi

ಮುಂಬೈ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಬಾಲಿವುಡ್‍ನ ಖ್ಯಾತ ನಿರ್ಮಾಪಕ ಅನಿಲ್ ಸೂರಿ(77) ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ. ಅನಿಲ್ ಅವರಿಗೆ ಜೂನ್.2ರಂದು ಜ್ವರ ಕಾಣಿಸಿಕೊಂಡಿದ್ದು, ಬಳಿಕ ಉಸಿರಾಟದ ಸಮಸ್ಯೆ ತೀವ್ರವಾಗಿ ಕಾಣಿಸಿಕೊಂಡಿದ್ದರಿಂದ ಜೂನ್.3ರಂದು ಮುಂಬೈನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್‍ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇಂದು ಮಧ್ಯಾಹ್ನ ಕೋವಿಡ್ ನಿಯಮಾನುಸಾರವಾಗಿ ಅಂತ್ಯಕ್ರಿಯೆ ನಡೆಯಲಿದೆ.