ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿದ ರಾಜ್ಯಪಾಲರು…

160
firstsuddi

ಮುಂಬೈ : ಮಹಾರಾಷ್ಟ್ರದಲ್ಲಿ ಕ್ಷಣ ಕ್ಷಣಕ್ಕೂ ರಾಜಕೀಯ ತಿರುವು ಪಡೆಯುತ್ತಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಎನ್ಸಿಪಿ ಹಾಗೂ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚಿಸಲು ಮುಂದಾಗಿದ್ದ ಶಿವಸೇನೆಗೆ ಬಿಗ್ ಶಾಕ್ ನೀಡಿದ್ದಾರೆ. ರಾಜ್ಯಪಾಲರು ಎನ್‍ಸಿಪಿ ಪಕ್ಷಕ್ಕೆ ಸರ್ಕಾರ ರಚನೆ ಮಾಡುವಂತೆ ಆಹ್ವಾನ ನೀಡಿದ್ದರು. ಎನ್‍ಸಿಪಿ ರಾಜ್ಯಪಾಲರ ಆಹ್ವಾನವನ್ನು ಸ್ವೀಕರಿಸಿದ್ದರೂ ಈವರೆಗೂ ಸರ್ಕಾರ ರಚನೆ ಮಾಡದ ಕಾರಣ ರಾಜ್ಯಪಾಲರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿದ್ದಾರೆ.