ಮುಂಬೈ : ಮಹಾರಾಷ್ಟ್ರದ ಗೊಂಡಿಯಾ ನಗರದಲ್ಲಿ ಪ್ಯಾಸೆಂಜರ್ ರೈಲು ಮುಂಭಾಗದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ರೈಲಿನ ಮೂರು ಬೋಗಿಗಳು ಹಳಿ ತಪ್ಪಿದ ಪರಿಣಾಮ ಸುಮಾರು 53 ಮಂದಿ ಗಾಯಗೊಂಡಿದ್ದಾರೆ.
ಇಂದು ಮುಂಜಾನೆ 2.30ರ ಸುಮಾರಿಗೆ ಈ ಅಪಘಾತದ ಸಂಭವಿಸಿದ್ದು, ಘಟನೆಯಲ್ಲಿ 53 ಮಂದಿ ಗಾಯಗೊಂಡಿದ್ದರೆ, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲು ‘ಭಗತ್ ಕಿ ಕೋಠಿ’ ನಡುವೆ ಸಿಗ್ನಲ್ ಸಿಗದಿರುವುದು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಈ ರೈಲು ರಾಯ್ ಪುರದಿಂದ ಹೊರಟು ನಾಗ್ಪುರ ಕಡೆಗೆ ಬರುತ್ತಿತ್ತು. ಭೀಕರ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.










