ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‍ಮುಖ್‍ಗೆ ನ. 19ರವರೆಗೆ ನ್ಯಾಯಾಂಗ ಬಂಧನ…

75
firstsuddi

ನವದೆಹಲಿ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ದೇಶ್‌ಮುಖ್ ಅವರನ್ನು ನ. 2ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇಂದು ಅವರನ್ನು ವಿಶೇಷ ರಜಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನವೆಂಬರ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮುಂಬೈನ ಹೋಟೆಲ್‌ಗಳು ಮತ್ತು ಬಾರ್‌ಗಳಿಂದ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸುವಂತೆ ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜ್ ಅವರಿಗೆ ಅನಿಲ್ ದೇಶಮುಖ್ ನಿರ್ದೇಶನ ನೀಡಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಬಳಿಕ ಈ ಆರೋಪದ ಹಿನ್ನೆಲೆಯಲ್ಲಿ ಅನಿಲ್ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.