ಮಹಾರಾಷ್ಟ್ರದ ಮುಂದಿನ ಸಿಎಂ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ : ಮೂಲಗಳು.

52
firstsuddi

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹಾಗೂ ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಪ್ರೀಂಕೋರ್ಟ್ ಮಹಾರಾಷ್ಟ್ರದ ಅಘಾಡಿ ಸರ್ಕಾರಕ್ಕೆ ವಿಶ್ವಾಸಮತಯಾಚನೆ ಮಾಡಲು ಆದೇಶ ನೀಡುತ್ತಿದ್ದಂತೆ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದೀಗ, ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ ಸಿಎಂ ಸ್ಥಾನಕ್ಕೇರುವುದು ಬಹುತೇಕ ಖಚಿತವಾಗಿದೆ.

ಉದ್ಧವ್ ಠಾಕ್ರೆ ರಾಜೀನಾಮೆ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ಇಂದು ಸಂಜೆ ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿದ್ದಾರೆ. ಫಡ್ನವಿಸ್ ಅವರು ಏಕನಾಥ್ ಶಿಂಧೆ ಜೊತೆಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಉದ್ಧವ್ ವಿರುದ್ಧ ಬಂಡೆದ್ದ ಶಾಸಕರು ಈಗಾಗಲೇ ಗೋವಾದ ಪಣಜಿಯಲ್ಲಿದ್ದು, ಮುಖ್ಯಸ್ಥ ಏಕನಾಥ್ ಶಿಂಧೆ ಮುಂಬೈಗೆ ಆಗಮಿಸಿದ್ದಾರೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಇಂದೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.