ಮಹಾರಾಷ್ಟ್ರದ ಶಿವಸೇನಾ ಶಾಸಕನ ಪತ್ನಿ ಶವವಾಗಿ ಪತ್ತೆ…

72
firstsuddi

ಮುಂಬೈ : ಮಹಾರಾಷ್ಟ್ರದ ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಪತ್ನಿ ರಜನಿ ಅವರು ನಿನ್ನೆ ರಾತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುರ್ಲಾ ವಿಧಾನಸಭಾ ಕ್ಷೇತ್ರದಿಂದ ಕುಡಾಲ್ಕರ್ ಎರಡು ಬಾರಿ ಶಿವಸೇನೆ ಶಾಸಕರಾಗಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ವೇಳೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಇದಕ್ಕೆ ಕಾರಣ ಏನು ಎಂಬುವುದರ ಬಗ್ಗೆ ಸ್ಪಷ್ಟವಾದ ಮಾಹಿತಿ ದೊರೆತಿಲ್ಲ. ಇದೊಂದು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದ್ದು, ಘಟನೆ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಎಂದು ನೆಹರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.