ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ. ಸದ್ಯ ರಾಜ್ಯದ 10 ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ತಗುಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ದಿನೇದಿನೆ ಏರುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೀಗೆ ಏರಿಕೆಯಾಗುತ್ತಲೇ ಹೋದರೆ ಕಠಿಣ ನಿರ್ಬಂಧ ವಿಧಿಸುವುದು ಅನಿವಾರ್ಯವಾಗುತ್ತದೆ. ಹಾಗೆ, ಮಾಡಬಾರದು ಅಂದರೆ ಜನರು ಕೊವಿಡ್-19 ನಿಯಂತ್ರಣ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಜನವರಿ 7ರವರೆಗೂ ಸೆಕ್ಷನ್-144 ಜಾರಿಗೊಳಿಸಲಾಗಿದೆ. ಅಲ್ಲದೇ ಡಿಸೆಂಬರ್ 30 ರಿಂದ ಜನವರಿ 7ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಜನರು ಸೇರುವುದನ್ನು ನಿಷೇಧಿಸಲಾಗಿದೆ.
ಮಹಾರಾಷ್ಟ್ರದಲ್ಲಿ ನಿನ್ನೆ 8067 ಹೊಸ ಕೊವಿಡ್-19 ಕೇಸ್ಗಳು ದಾಖಲಾಗಿದ್ದು, 454 ಓಮಿಕ್ರಾನ್ ಸೋಂಕಿತರು ಇದ್ದಾರೆ.










