ಮುಂಬೈ : ಮಹಾರಾಷ್ಟ್ರ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಶಿವಸೇನೆ ಮತ್ತು ಬಿಜೆಪಿ ನಡುವಿನ ಹಗ್ಗಜಗ್ಗಾಟ ತಾರಕಕ್ಕೇರಿದ್ದು, ಶಿವಸೇನಾ ಸಂಸದ ಹಾಗೂ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವ ಅರವಿಂದ್ ಸಾವಂತ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ತಿಳಿಸಿರುವ ಅರವಿಂದ್ ಸಾವಂತ್ ಅವರು “ಶಿವಸೇನೆ ಸತ್ಯದ ಪರವಾಗಿ ನಿಂತಿದೆ. ಈ ಸಂದರ್ಭದಲ್ಲಿ ದೆಹಲಿಯಲ್ಲಿ ಸರ್ಕಾರದ ಜೊತೆ ನಾನು ಹೇಗೆ ಉಳಿದುಕೊಳ್ಳಲಿ? ಹೀಗಾಗಿ ನಾನು ನನ್ನ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. ಈ ಕುರಿತು ಸುದ್ದಿಗೋಷ್ಟಿ ನಡೆಸಿ ವಿವರವನ್ನು ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.










