ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ.

68
firstsuddi

ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಜೈಲಿನಿಂದ ಬಿಡುಗಡೆ ಮಾಡುವಂತೆ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದ್ದು, ಈ ಹಂತದಲ್ಲಿ ನಾವು ತನಿಖೆಯ ಯಾವುದೇ ಪ್ರಕ್ರಿಯೆಗೆ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ನವಾಬ್ ಮಲಿಕ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಯಾವುದೇ ಪೂರ್ವಪೇಕ್ಷಿತ ಅಪರಾಧ ಇಲ್ಲದಿರುವುದರಿಂದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಹೇಗೆ ಅನ್ವಯಿಸುತ್ತದೆ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ, ಈ ಹಂತದಲ್ಲಿ ನಾವು ಮಧ್ಯ ಪ್ರವೇಶಿಸುವುದಿಲ್ಲ. ನೀವು ಪಿಎಂಎಲ್‍ಎ(ಹಣ ವರ್ಗಾವಣೆ ತಡೆ ಕಾಯ್ದೆ) ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹೋದರಿ ಹಸೀನಾ ಪಾರ್ಕರ್ ಜೊತೆಗಿನ ಆಸ್ತಿ ವ್ಯವಹಾರ ಸಂಬಂಧ ಇಡಿಯಿಂದ ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ಎದುರಿಸುತ್ತಿದ್ದಾರೆ. ಫೆ.23 ರಂದು ನವಾಬ್ ಮಲಿಕ್ ರನ್ನು ಇಡಿ ಬಂಧಿಸಿತ್ತು.