ಮಹಾ ಕುಂಭಮೇಳದಲ್ಲಿ ಪ್ರಕಾಶ್ ರೈ ಎಐ ಫೋಟೋ, ಸಂಬರಗಿ ವಿರುದ್ಧ ದೂರು.

48

ಮೈಸೂರು: ಮಹಾ ಕುಂಭಮೇಳದಲ್ಲಿ ನಟ ಪ್ರಕಾಶ್ ರೈ ಸ್ನಾನ ಮಾಡುತ್ತಿರುವ ರೀತಿಯ ಫೇಕ್ ಫೋಟೋ ವೈರಲ್ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರಾಜ್ ಕೇಸ್ ದಾಖಲು ಮಾಡಿದ್ದಾರೆ. ಈ ಫೋಟೋ ನಿಜ ಎಂದು ನಂಬಿಸುವ ಕೆಲಸ ಕೆಲವರಿಂದ ಆಗಿದೆ. ಇಲ್ಲದ್ದನ್ನು ಇರುವ ರೀತಿಯಲ್ಲಿ ತೋರಿಸುತ್ತಿರುವ ಬಗ್ಗೆ ಪ್ರಕಾಶ್ ರೈಗೆ ಅಸಮಾಧಾನ ಇದೆ. ಹೀಗಾಗಿ, ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ರಾಜ್ ನೀಡಿದ ದೂರಿನ ಅಡಿ ಎಫ್‍ಐಆರ್ ದಾಖಲಾಗಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕುಂಭಮೇಳದ ಪುಣ್ಯ ಸ್ನಾನ ದೇಶದಲ್ಲಿ ನಡೆಯುತ್ತಿದೆ. ಹಿಂದೂ ಧರ್ಮದವರಿಗೆ ಹಾಗೂ ದೇವರನ್ನ ನಂಬುವವರಿಗೆ ಅದು ಪುಣ್ಯವಾದ ಸ್ಥಳ. ಈಗ ಎಐ ಆ್ಯಪ್ ಬಳಿಸಿ ಪ್ರಕಾಶ್ ರಾಜ್ ಕುಂಭಮೇಳದಲ್ಲಿ ಸ್ನಾನ ಮಾಡಿದ್ರಾ ಎಂದು ಫೋಟೋ ವೈರಲ್ ಮಾಡುತ್ತಿದ್ದಾರೆ. ಅಂತಹ ಪುಣ್ಯದ ಸ್ನಾನ ನಡೆಯಬೇಕದಾರೆ ಅದರಲ್ಲಿ ರಾಜಕಾರಣ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ತಮ್ಮ ಫೋಟೋವನ್ನು ಎಐ ತಂತ್ರಜ್ಞಾನ ಬಳಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರಕಾಶ್ ರೈ ದೂರಿನಲ್ಲಿ ಕೋರಿದ್ದಾರೆ.