ಮಹಾ ಬಿಕ್ಕಟ್ಟು ಕೊನೆಗೂ ಅಂತ್ಯ ; ವಿಶ್ವಾಸ ಮತಯಾಚನೆಯಲ್ಲಿ ಗೆದ್ದ ಶಿಂಧೆ.

74
firstsuddi

ಮುಂಬೈ : ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೆಗೂ ಅಂತ್ಯ ಕಂಡಿದೆ. ಇಂದು ನಡೆದ ವಿಶ್ವಾಸಮತ ಪರೀಕ್ಷೆಯಲ್ಲಿ ಸಿಎಂ ಏಕನಾಥ್ ಶಿಂದೆ ಗೆದ್ದು ಬೀಗಿದ್ದಾರೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಹುಮತ ಹೊಂದಿದ್ದಾರೆಯೇ ಎಂಬುದನ್ನು ನಿರ್ಧರಿಸಲು ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತಯಾಚನೆ ನಡೆಸಲಾಯಿತು. ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ವೇಳೆ ಏಕನಾಥ್ ಶಿಂದೆ 162 ಮತಗಳನ್ನು ಪಡೆದು ಬಹುಮತ ಸಾಬೀತು ಮಾಡಿದರು. ಅವರ ವಿರುದ್ಧ 99 ಮತಗಳು ಚಲಾವಣೆಯಾದವು.

ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಮಹಾವಿಕಾಸ ಆಘಾಡಿ ಸರ್ಕಾರದ ವಿರುದ್ಧ ಬಂಡೆದ್ದು, ಬಿಜೆಪಿಯೊಂದಿಗೆ ಸೇರಿ ಶಿಂಧೆ ಅವರು ಮುಖ್ಯಮಂತ್ರಿಯಾಗಿದ್ದರು. ಬಿಜೆಪಿಯ ದೇವೇಂದ್ರ ಫಡಣವೀಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ.