ಮಹಾ ಶಿವರಾತ್ರಿ, ವಾರಾಂತ್ಯ ರಜೆ: ಕೆಎಸ್ಆರ್​ಟಿಸಿಯಿಂದ 1500 ಹೆಚ್ಚುವರಿ ವಿಶೇಷ ಬಸ್…

37
firstsuddi

ಬೆಂಗಳೂರು: ಮಹಾ ಶಿವರಾತ್ರಿ ಮತ್ತು ವಾರಾಂತ್ಯದ ಪ್ರಯಾಣಿಕರ ದಟ್ಟಣೆ ಹಾಗೂ ಬೇಡಿಕೆಯನ್ನು ಪೂರೈಸಲು ಮಾರ್ಚ್ 7 ಮತ್ತು 10 ರ ನಡುವೆ ಬೆಂಗಳೂರಿನಿಂದ ವಿವಿಧ ನಗರಗಳಿಗೆ 1,500 ಹೆಚ್ಚುವರಿ ಬಸ್ ಸೇವೆ ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿನ್ನೆ ತಿಳಿಸಿದೆ.

ಅದೇ ರೀತಿ ಮಾರ್ಚ್ 10 ಮತ್ತು 11ರಂದು ವಾಪಸ್ ಬರುವವರಿಗಾಗಿ ವಿವಿಧ ನಗರಗಳಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದಲೂ ವಿಶೇಷ ಬಸ್‌ಗಳು ಕಾರ್ಯಾಚರಿಸಲಿವೆ.

ಹೆಚ್ಚುವರಿ ಬಸ್‌ಗಳು: ಹೆಚ್ಚುವರಿ ವಿಶೇಷ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮತ್ತಿತರ ಕಡೆಗಳಿಗೆ ಸಂಚರಿಸಲಿವೆ.

ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಕಡೆಗೆ ವಿಶೇಷ ಬಸ್‌ಗಳು ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಕಾರ್ಯನಿರ್ವಹಿಸಲಿವೆ.

ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿರಾಪಳ್ಳಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಝಿಕ್ಕೋಡ್, ತಮಿಳುನಾಡು ಮತ್ತು ಕೇರಳದ ಇತರ ಸ್ಥಳಗಳಿಗೆ ಎಲ್ಲಾ ಪ್ರೀಮಿಯಂ ವಿಶೇಷ ಬಸ್‌ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ ಎಂದು ಕೆಎಸ್ಆರ್​ಟಿಸಿ ತಿಳಿಸಿದೆ.