ಬೆಂಗಳೂರು : ಮಹಿಳಾ ಪ್ರಯಾಣಿಕರಿಗೆ ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಸಂಸ್ಥೆಯ ಎಲ್ಲ ಬಸ್‍ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿದೆ.
ಬಿಎಂಟಿಸಿ ಬಸ್ ಗಳಲ್ಲಿ ದಿನಪೂರ್ತಿ ಮಹಿಳೆಯರು ಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಯಾವುದೇ ದಾಖಲಾತಿ, ಗುರುತಿನ ಚೀಟಿಯ ಅವಶ್ಯಕತೆ ಇಲ್ಲ.
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳಲ್ಲಿ ಪ್ರತಿನಿತ್ಯ ಸರಾಸರಿ 8-9 ಲಕ್ಷ ಮಹಿಳಾ ಪ್ರಯಾಣಿಕರು ಸಂಚಾರ ಮಾಡುತ್ತಾರೆ. ನಿನ್ನೆ ಮಧ್ಯರಾತ್ರಿ 12 ಗಂಟೆಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ವಿಶೇಷ ಸೇವೆ ಬಗ್ಗೆ ನಾರಿಯರು ಸಂತಸ ವ್ಯಕ್ತಪಡಿಸಿದ್ದು, ಸರ್ಕಾರ ಮತ್ತು ಬಿಎಂಟಿಸಿಗೆ ಧನ್ಯವಾದ ಅರ್ಪಿಸಿದ್ದಾರೆ.










