ಮಹಿಳಾ ರೋಗಿಗೆ ಸೆಕ್ಸ್ ಗೆ ಸಹಕರಿಸುವಂತೆ ಕಿರುಕುಳ- ಕಾಮುಕ ಅರೆಸ್ಟ್…

60
firstsuddi

ಬೆಂಗಳೂರು: ಮಹಿಳಾ ರೋಗಿಗೆ ಸೆಕ್ಸ್ ಗೆ ಸಹಕರಿಸುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಅಶೋಕ್ ಬಂಧಿತ ಆರೋಪಿ. ಈತ ಖಾಸಗಿ ಆಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ.

ವಾಂತಿ, ಭೇದಿ ಮತ್ತು ಸುಸ್ತು ಹಿನ್ನೆಲೆ ಮಹಿಳೆಯೊಬ್ಬರು ಸೆಪ್ಟೆಂಬರ್ 3ರಂದು ಹೆಬ್ಬಾಳದಲ್ಲಿರೋ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ಸಿಬ್ಬಂದಿ ಸಿಟಿ ಸ್ಕ್ಯಾನ್ ಮಾಡುವ ನೆಪದಲ್ಲಿ ಮಹಿಳೆಯ ಖಾಸಗಿ ಭಾಗಗಳನ್ನು ಸ್ಪರ್ಶಿಸಿ, ಪ್ಯಾಂಟ್ ಜಿಪ್ ಓಪನ್ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕಿರುಕುಳ ನೀಡಿದ್ದಾನೆ ಎಂದು ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸದ್ಯ ಸಂತ್ರಸ್ತೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಕೋಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.