ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ…

72
firstsuddi

ಕೊಪ್ಪಳ : ವಿವಾಹಿತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಕುಷ್ಟಗಿ ತಾಲೂಕಿನ ಬೊಮ್ಮನಾಳ ಗ್ರಾಮದ ಜಮೀನಿನಲ್ಲಿದ್ದ ಪ್ರಕಾಶ ಪೂಜಾರ ಎಂಬಾತ ಗೊಬ್ಬರದ ಬುಟ್ಟಿ ಎತ್ತುವಂತೆ ಮಹಿಳೆಯನ್ನು ಸಹಾಯಕ್ಕೆ ಕರೆದಿದ್ದಾನೆ. ಈ ವೇಳೆ ಸಹಾಯಕ್ಕೆ ಬಂದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಪ್ರಕಾಶ್ ಗೆ ಚಪ್ಪಲಿಯಿಂದ ಥಳಿಸಿ ಮೆರವಣಿಗೆ ಮಾಡಿದ್ದರು.

ಚಪ್ಪಲಿ ಹಾಕಿ ಮೆರವಣಿಗೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಷ್ಟಗಿ ತಾಲೂಕಿನ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ದೂರು -ಪ್ರತಿದೂರು ದಾಖಲಾಗಿದ್ದು, 55 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.