ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿಯ ಬಂಧನ…

77
firstsuddi

ಮಂಗಳೂರು : ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮುಲ್ಕಿ ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ (52) ಎಂದು ಗುರುತಿಸಲಾಗಿದೆ. ಫೆ. 3 ರಂದು ಮಂಗಳೂರು ತಾಲೂಕು ಕೊಳಂಬೆ ಗ್ರಾಮದ ಕಜೆ ಕೋಡಿ ಹೌಸ್ ಎಂಬಲ್ಲಿ ಕಸ್ತೂರಿ ಮಾತ್ರೆ ಗಳನ್ನು ಮಾರಾಟ ಮಾಡಲು ಬಂದಿದ್ದ. ಈ ವೇಳೆ, ಮನೆಯೊಂದರಲ್ಲಿ ಇದ್ದ ಒಂಟಿ ಮಹಿಳೆಯ ಕೈಯನ್ನು ಹಿಡಿದು ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.