ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕಾಮುಕರು..!

66
firstsuddi

ದಾವಣಗೆರೆ : ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಮ್ಯಾಸರಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮ್ಯಾಸರಹಳ್ಳಿಯ ಪ್ರಭು ಹಾಗೂ ಕುಂದುವಾಡದ ಕಿರಣ್ ಎಂಬುವವರು 25 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾರೆ. ಮಹಿಳೆಯು ಮ್ಯಾಸರಹಳ್ಳಿ ಗ್ರಾಮದ ಹೊರವಲಯದಲ್ಲಿ ತೊಗರಿ ಹಾಕಿದ್ದರು. ಆ ವೇಳೆ ಅಲ್ಲಿಗೆ ಬಂದ ಇವರಿಬ್ಬರು ಮಹಿಳೆಯನ್ನು ಹೆದರಿಸಿ ಜಮೀನಿಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಆಕೆಗೆ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ. ಜಮೀನಿನಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಇದನ್ನು ನೋಡಿದ ಮಹಿಳೆಯ ಸಂಬಂಧಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಿಳೆಯು ಗಂಡನಿಂದ ದೂರವಿದ್ದು, ಮ್ಯಾಸರಹಳ್ಳಿಯ ಸಹೋದರಿಯ ಮನೆಯಲ್ಲಿಯೇ ಕೆಲ ದಿನಗಳಿಂದ ವಾಸಿಸುತ್ತಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.