ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ನಾನೂ ಸ್ಪರ್ಧೆ ಮಾಡಲ್ಲ : ರಮೇಶ್ ಜಾರಕಿಹೊಳಿ.

62
firstsuddi

ವಿಜಯಪುರ : ಅಥಣಿ ಶಾಸಕ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನು ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸ್ಥಾನ ಗಳಿಸಲು ಮುಂದಾಗುತ್ತೇವೆ. ಹಾಲಿ 13 ಬಿಜೆಪಿ ಸ್ಥಾನಗಳು ಮಾತ್ರವಲ್ಲದೇ ಇನ್ನೂ ಹೆಚ್ಚು ಕ್ಷೇತ್ರಗಳಲ್ಲಿ ನಾವು ವಿಜಯ ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಸಚಿವ ಸ್ಥಾನ ಕೊಡದೆ ಇದ್ದುದ್ದಕ್ಕೆ ರಮೇಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸ್ಥಾನ ಸಿಗದೆ ಇರೋದಕ್ಕೆ ನಿರಾಶೆ ಇಲ್ಲ. ನಾನು ಇದ್ದ ಸಚಿವ ಸ್ಥಾನ ಬಿಟ್ಟು ಬಿಜೆಪಿಗೆ ಬಂದಿದ್ದೇನೆ. ಬಿಜೆಪಿ ತತ್ವ ಸಿದ್ದಾಂತ ನಂಬಿ ಬಂದಿದ್ದೇನೆ ಹೊರತು ಸಚಿವ ಸ್ಥಾನಕ್ಕಾಗಿ ಬಂದಿಲ್ಲ ಎಂದು ಹೇಳಿದರು.