ಚೆನ್ನೈ: ಕರ್ನಾಟಕದ ಕೇಡರ್ನ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಇಂದು ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ವರದಿಯಾಗಿದೆ. ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಹೌದು, ನಾನು ರಾಜಕೀಯ ರಂಗಕ್ಕೆ ಇಳಿಯಲು ನಿರ್ಧರಿಸಿದ್ದೇನೆ. ನಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು 2009ರ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ ಆಂಗ್ಲ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
41ರ ಹರೆಯದ ಮಾಜಿ ಅಧಿಕಾರಿ ಇಂದು ತಮಿಳುನಾಡು ಕಾಂಗ್ರೆಸ್ ಸಮಿತಿಗೆ(ಟಿಎನ್ಸಿಸಿ) ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡಿನ ಉಸ್ತುವಾರಿ ಹಾಗೂ ಕರ್ನಾಟಕದ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಸೆಂಥಿಲ್ರನ್ನು ಪಕ್ಷಕ್ಕೆ ಕರೆತರಲು ಮುಖ್ಯ ಪಾತ್ರವಹಿಸಿದ್ದಾರೆ ಎಂದು ವರದಿಯಾಗಿದೆ.










