ಮಂಗಳೂರು : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳ ಹಿಂದೆ ಯೋಗ ಮಾಡುವ ವೇಳೆ ಬಿದ್ದು ತಲೆಗೆ ಗಾಯವಾಗಿದ್ದು, ಆಸ್ಕರ್ ಅವರಿಗೆ ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.
ಆಸ್ಕರ್ ಫರ್ನಾಂಡಿಸ್ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ರಸ್ತೆ, ಸಾರಿಗೆ, ಹೆದ್ದಾರಿ ಮತ್ತು ಕಾರ್ಮಿಕ ಸಚಿವರಾಗಿಯೂ ಕೆಲಸ ಮಾಡಿದ್ದರು. 1980ರಿಂದ 1996ರ ವರೆಗೆ ಕರ್ನಾಟಕದ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು.










