ಮಾಜಿ ಕ್ರಿಕೆಟಿಗ ಬಿ. ವಿಜಯಕೃಷ್ಣ ನಿಧನ ; ವಿಜಯಕೃಷ್ಣ ಅವರ ನಿಧನಕ್ಕೆ ಬಿಎಸ್ ವೈ ಸಂತಾಪ…

125
firstsuddi

ಬೆಂಗಳೂರು : ಮಾಜಿ ಕ್ರಿಕೆಟಿಗ ಬಿ. ವಿಜಯಕೃಷ್ಣ ಅವರು ಇಂದು ಮುಂಜಾನೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 71 ವರ್ಷ ವಯಸ್ಸಾಗಿದ್ದ ವಿಜಯಕೃಷ್ಣ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ 5.50ರ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದ ಪರ ಆಡುತ್ತಿದ್ದ ಕೆ. ನಾಗಭೂಷಣ್ ಅವರ ಪ್ರೋತ್ಸಾಹದಿಂದ ಮೈದಾನಕಿಳಿದಿದ್ದ ವಿಜಯಕೃಷ್ಣ ಅತ್ಯುತ್ತಮ ಆಲ್ ರೌಂಡರ್ ಆಗಿ ಪ್ರದಶ್ರನ ನೀಡಿದ್ದರು. ವಿಜಯಕೃಷ್ಣ ಅವರು1968-69ನೇ ಸಾಲಿನಲ್ಲಿ ಆಡಿದ ಮೊದಲ ರಣಜಿ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಮೂರು ವಿಕೆಟ್ ಪಡೆದಿದ್ದರು. 

ಇನ್ನೂ ವಿಜಯಕೃಷ್ಣ ಅವರ ನಿಧನಕ್ಕೆ ಸಿಎಂ ಯಡಿಂಯೂರಪ್ಪನವರು ಸಂತಾಪ ಸೂಚಿಸಿದ್ದು, ಕರ್ನಾಟಕ 2 ಬಾರಿ ರಣಜಿ ಟ್ರೋಫಿ ಗೆಲ್ಲುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ನಿಧನದಿಂದ ನಾಡು ಒಬ್ಬ ಅತ್ಯುತ್ತಮ ಕ್ರಿಕೆಟ್ ಆಟಗಾರನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.