ಬೀದರ್: ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ತಾಲೂಕಿನ ಚಿಟ್ಟಗುಪ್ಪದ ನಿರ್ಣಾ ಗ್ರಾಮದಲ್ಲಿ ನಡೆದಿದೆ.
ಮಲ್ಲಿಕಾರ್ಜುನ್ (46) ಕೊಲೆಯಾದ ದುರ್ದೈವಿ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ್ ಕೊಲೆಯಾಗಿದೆ ಎಂದು ತಿಳಿದು ಬಂದಿದೆ. ಈ ವೇಳೆ ಅವರ ಮಗನ ಮೇಲೂ ಹಲ್ಲೆ ನಡೆಸಲಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದ ಲಿಂಗರಾಜು, ಕಾಶಿನಾಥ್, ಜಗನಾಥ್ ಸೇರಿದಂತೆ ಒಟ್ಟು 8 ರಿಂದ 9 ಜನ ಸೇರಿ ಮಾರಕಾಸ್ತ್ರಗಳಿಂದ ಮಲ್ಲಿಕಾರ್ಜುನ್ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಮಲ್ಲಿಕಾರ್ಜುನ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮನ್ನಾಏಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










