ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರಿಗೆ ಐಟಿ ಶಾಕ್…

230

ಬೆಂಗಳೂರು : ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಹಾಗೂ ಮಾಜಿ ಕೇಂದ್ರ ಸಚಿವ ಜಾಲಪ್ಪ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಮೇಶ್ವರ್ ಅವರ ಒಡೆತನದ ನೆಲಮಂಗಲದಲ್ಲಿರುವ ಸಿದ್ದಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನಲ್ಲಿರುವ ಶಾಲಾ-ಕಾಲೇಜುಗಳ ಕಚೇರಿಯ ಮೇಲೆ ದಾಳಿ ನಡೆಸಿದ್ದು, ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಕೋಲಾರದಲ್ಲಿರುವ ಜಾಲಪ್ಪ ಅವರ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.