ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೊರೊನಾ…

86
firstsuddi

ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸೋಂಕಿನ ಗುಣಲಕ್ಷಣ ಕಾಣಿಸಿಕೊಂಡಿದ್ದರಿಂದ ನಿನ್ನೆ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನವರಿ 15ರಂದು ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆದಿದ್ದರು.