ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು…

70
firstsuddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಸ್ತ್ರಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಪೈಲ್ಸ್ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ನಗರದ ಹೆಚ್ ಎಎಲ್ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿದ್ದರಾಮಯ್ಯ ಅವರು ಇಂದು ಸಂಜೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದ್ದು, ಮುಂದಿನ ನಾಲ್ಕೈದು ದಿನಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.