ಬೆಂಗಳೂರು : ಮಾಜಿ ಸಚಿವ ಅಂಜನಮೂರ್ತಿ(78) ನಿಧನರಾಗಿದ್ದಾರೆ.
ಅಂಜನಮೂರ್ತಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ನೆಲಮಂಗಲದಲ್ಲಿ ಮೂರು ಬಾರಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಅವರು ವಸತಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಈ ಬಾರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು.










