ಬೆಂಗಳೂರು : ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ನಾಗಮಂಗಲ ವಿಧಾನಸಭೆ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಎಚ್.ಟಿ. ಕೃಷ್ಣಪ್ಪ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿದ್ದರು.
ಮೃತರ ಅಂತ್ಯಕ್ರಿಯೆಯು ಇಂದು ಸಂಜೆ 5 ಗಂಟೆ ಸುಮಾರಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿ.ಬಿ.ಬಡಾವಣೆ ಹೇಮಾವತಿ ಕ್ವಾಟ್ರಸ್ ಮುಂಭಾಗದ ಅವರ ಜಮೀನಿನಲ್ಲಿ ನಡೆಯಲಿದೆ ಎಂಬುದಾಗಿ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.