ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್…

123
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ರಾಜಕೀಯ ನಾಯಕರನ್ನು ಬೆಂಬಿಡದೇ ಕಾಡುತ್ತಿದ್ದು, ಇಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ಜಿ.ಟಿ. ದೇವೇಗೌಡ ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಸೋಂಕು ತಗುಲಿರುವ ಬಗ್ಗೆ ಮಾಡಿರುವ ಜಿ.ಟಿ.ದೇವೇಗೌಡ ಅವರು, ನಾನು ಕೋವಿಡ್-19ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ.ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು,ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.